
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದ ಬಗ್ಗೆ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ನಡುವೆ ಜಾರಿ ನಿರ್ದೇಶನಾಲಯ(ಇಡಿ) ಕೂಡ ಎಂಟ್ರಿ ಕೊಟ್ಟಿದೆ.
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ವಿವಿಧೆಡೆ ಶೋಧ ನಡೆಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಇಡಿ ಅಧಿಕಾರಿಗಳು 8 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.