ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು ನಟಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ.
ನಟಿ ರನ್ಯಾ ರಾವ್ ಬೆಂಗಳೂರಿನ ನಿವಾಸದ ಮೇಲೆ ನಿನ್ನೆ ಸಂಜೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ 5ನೇ ಕ್ರಾಸ್ ನಲ್ಲಿರುವ ನಂದವಾಣಿ ಮ್ಯಾನ್ಶನ್ ನ ರನ್ಯಾ ರಾವ್ ಅವರ ಫ್ಲ್ಯಾಟ್ ಗೆ ಆಗಮಿಸಿದ್ದ ಇಬ್ಬರು ಸಿಬಿಐ ಅಧಿಕಾರಿಗಳು ಮನೆಯಲಿ ಶೋಧ ನಡೆಸಿ ತೆರಳಿದ್ದಾರೆ.
ಇಬ್ಬರು ಅಧಿಕಾರಿಗಳು ನಿನ್ನೆ ಸಂಜೆ 4ರಿಂದ 5 ಗಂಟೆಯವರೆಗೆ ಒಂದು ಗಂಟೆ ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.