ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕಿ ಮೇಲೆ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಇವರಲ್ಲಿ ಒಬ್ಬ ಬಾಲಕಿಯನ್ನು ಪ್ರೀತಿಸಿದ್ದು, ಆಕೆಯೊಂದಿಗಿನ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿಕೊಂಡಿದ್ದ. ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಉಳಿದವರು ಅತ್ಯಾಚಾರ ಎಸಗಿದ್ದರು ಎನ್ನಲಾಗಿದೆ.
ಮೂರು ತಿಂಗಳ ಕಾಲ ಬೇರೆ ಬೇರೆ ಸ್ಥಳದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಭಾನುವಾರ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸೋಮವಾರ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಮುಂದುವರಿಸಲಾಗಿದೆ ಎಂದು ಹೇಳಲಾಗಿದೆ.