
ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ್, ಲವಕುಮಾರ್, ನವೀನ್ ಬಂಧಿತ ಆರೋಪಿಗಳು. ಮತ್ತಿಬ್ಬರು ಆರೋಪಿಗಳಾದ ಶಬರೀಶ್, ಸುಮನ್ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬಾಲಕಿಯನ್ನು ಕೆಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.