
ಶಿವಮೊಗ್ಗ ಜಿಲ್ಲೆ ಕುಂಸಿ ಸಮೀಪದ ಗ್ರಾಮವೊಂದರಲ್ಲಿ ಮಾವನೇ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.
65 ವರ್ಷದ ರಂಗಪ್ಪ ಅತ್ಯಾಚಾರವೆಸಗಿದ ಆರೋಪಿ ಎಂದು ಹೇಳಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ಜಮೀನಿಗೆ ಹೋಗಿದ್ದ ವೇಳೆ ಹಿಂಬಾಗಿಲ ಮೂಲಕ ಮನೆಯೊಳಗೆ ಬಂದ ಆರೋಪಿ ಸೊಸೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತವರಿಗೆ ಕಳುಹಿಸಲಾಗಿದೆ. ಕುಂಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.