alex Certify ಹಾಡಹಗಲೇ ಆಘಾತಕಾರಿ ಕೃತ್ಯ, ಆಟೋದಲ್ಲಿ ಯುವತಿ ಕರೆದೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಆಘಾತಕಾರಿ ಕೃತ್ಯ, ಆಟೋದಲ್ಲಿ ಯುವತಿ ಕರೆದೊಯ್ದು ಅತ್ಯಾಚಾರ

ಯಾದಗಿರಿ: ಯಾದಗಿರಿಯಲ್ಲಿ ಹಾಡಹಗಲೇ ಅಮಾನವೀಯ ಘಟನೆ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಏಪ್ರಿಲ್ 26 ರಂದು ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಟೋಚಾಲಕ ಹನುಮಂತ ಮತ್ತು ಆತನ ಸ್ನೇಹಿತ ನರಸಪ್ಪನನ್ನು ಬಂಧಿಸಿದ್ದಾರೆ. ಕೆಲಸದ ನಿಮಿತ್ತ ಯುವತಿ ಯಾದಗಿರಿಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಪೆಟ್ರೋಲ್ ಬಂಕ್ ಗೆ ಹೋಗಿ ಬರುವುದಾಗಿ ಹೊರವಲಯಕ್ಕೆ ಕರೆದುಕೊಂಡು ಹೋದ ಆರೋಪಿಗಳು ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...