alex Certify ಮದುವೆಯಾಗದೆ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಕೂಲಿಗೆ ಹೋದಾಗ ಪುಸಲಾಯಿಸಿ ದೈಹಿಕ ಸಂಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗದೆ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಕೂಲಿಗೆ ಹೋದಾಗ ಪುಸಲಾಯಿಸಿ ದೈಹಿಕ ಸಂಬಂಧ

ಚಾಮರಾಜನಗರ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕ ಕೈಕೊಟ್ಟಿದ್ದಾನೆ. ಇದರ ಪರಿಣಾಮ ಗರ್ಭಿಣಿಯಾಗಿದ್ದ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಚಾಮರಾಜನಗರ ಜಿಲ್ಲೆ ಉತ್ತುವಳ್ಳಿ ಗ್ರಾಮದ ಸಿದ್ಧರಾಜು ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಮಹಿಳಾ ಠಾಣೆ ಪೊಲೀಸರು ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ದಯ್ಯನಪುರದ ವ್ಯಕ್ತಿಗೆ ಸೇರಿದ ಜಮೀನಿಗೆ 17 ವರ್ಷದ ಅಪ್ರಾಪ್ತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಅಲ್ಲಿಗೆ ಕೆಲಸಕ್ಕೆ ಬರುತ್ತಿದ್ದ ಸಿದ್ದರಾಜು ಮದುವೆಯಾಗುವುದಾಗಿ ನಂಬಿಸಿ ಪುಸಲಾಯಿಸಿ ದೈಹಿಕ ಸಂಬಂಧ ಬೆಳೆಸಿದ್ದಾನೆ. ನಿರಂತರ ಅತ್ಯಾಚಾರದಿಂದ ಆಕೆ ಗರ್ಭಿಣಿಯಾಗಿದ್ದಾಳೆ.

ಆಕೆಯ ತಂದೆ ಕೆಲಸಕ್ಕಾಗಿ ಬೇರೆ ಊರಿಗೆ ಹೋಗಿದ್ದು, ಯಾವಾಗಲಾದರೊಮ್ಮೆ ಮನೆಗೆ ಬಂದು ಹೋಗುತ್ತಿದ್ದ. ತಾಯಿ ಬುದ್ಧಿಮಾಂಧ್ಯೆಯಾಗಿದ್ದಾಳೆ. ಹುಡುಗಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡು ಒದ್ದಾಡಿದ್ದು, ಕೆಲ ಸಮಯದ ನಂತರ ಮಗುವಿಗೆ ಜನ್ಮ ನೀಡಿದ್ದಾಳೆ. ಪೋಷಕರು ವಿಚಾರಿಸಿದಾಗ ಅತ್ಯಾಚಾರದ ವಿಷಯ ಗೊತ್ತಾಗಿದೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ತಾಯಿ, ಮಗುವನ್ನು ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಮಹಿಳಾ ಠಾಣೆ ಪೊಲೀಸರು ನಾಪತ್ತೆಯಾಗಿರುವ ಸಿದ್ಧರಾಜು ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...