ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಾಸನದ 5ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ದೇವರಾಜೇಗೌಡರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿತ್ತು, ನಂತರ ವಕೀಲ ದೇವರಾಜೇಗೌಡ ಹೈಕೋರ್ಟ್ ಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.