ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಐವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ
ಮೈಸೂರಿನ ಮೂರನೇ JMFC ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಜಡ್ಜ್ ಎದುರು ಹಾಜರುಪಡಿಸಲಾಗಿತ್ತು. ಪೊಲೀಸ್ ಕಸ್ಟಡಿಗೆ ವಹಿಸಿದ್ದು, ಇಂದಿನಿಂದ ಆರೋಪಿಗಳಿಗೆ ಡ್ರಿಲ್ ನಡೆಯಲಿದೆ.
ತಮಿಳುನಾಡಿನ ತಿರುಪ್ಪೂರ್ ಮೂಲದ ಆರೋಪಿಗಳನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.