ಬೆಂಗಳೂರು ; ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಿಡದಿ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಇಂಟರ್ ಪೋಲ್ ಗೆ ಸಿಐಡಿ ಪ್ರಸ್ತಾವನೆ ರವಾನೆ ಮಾಡಿದೆ.
ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನಿತ್ಯಾನಂದನ ವಿರುದ್ಧ ವಾರೆಂಟ್ ಜಾರಿಗೊಳಿಸಲಾಗಿದೆ. ಹೀಗಾಗಿ ನಿತ್ಯಾನಂದನ ಪತ್ತೆಗೆ ಇಂಟರ್ ಪೋಲ್ ಗೆ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.