ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ನಂತರ ಮದುವೆಯಾಗಲು ನಿರಾಕರಿಸಿದ್ದ ವ್ಯಕ್ತಿಯ ವಿರುದ್ಧ ಹೂಡಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಗೆ ಜನಿಸಿದ್ದ ಮಗು ಮತ್ತು ವ್ಯಕ್ತಿಯ ಡಿಎನ್ಎ ಒಂದೇ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಮಗುವಿನ ನಿರ್ವಹಣೆಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ಜೀವನಾಂಶ ಪಾವತಿಸುವಂತೆ ಆದೇಶ ನೀಡಿದೆ.
ಮಹಿಳೆ ಸಲ್ಲಿಸಿದ್ದ ದೂರು ಪ್ರಶ್ನಿಸಿ ಗದಗದ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಮಗುವಿಗೆ ಜೀವನಾಂಶ ಪಾವತಿಸಲು ತಿಳಿಸಿದೆ. ಮಹಿಳೆಯದು ಒಪ್ಪಿತ ಲೈಂಗಿಕ ಸಂಬಂಧವಾಗಿದ್ದು, ಇದು ಅತ್ಯಾಚಾರ ಆಗುವುದಿಲ್ಲ ಎಂದು ಆದೇಶಿಸಿದೆ.
ದಾಖಲಾದ ಹೇಳಿಕೆಗಳು, ಡಿಎನ್ಎ ವರದಿ ಪ್ರಕಾರ ಆರೋಪಿ ಮತ್ತು ಸಂತ್ರಸ್ತೆಗೆ ಮಗು ಜನಿಸಿದೆ. ಬಯಾಲಜಿಕಲ್ ತಂದೆಯಾಗಿರುವ ಆರೋಪಿ ತನ್ನ ಜವಾಬ್ದಾರಿಯಿಂದ ನುಣಚಿಕೊಳ್ಳಲಾಗದು. ಆತ ಮಗುವಿಗೆ ಪ್ರತಿ ತಿಂಗಳು 10,000 ರೂ. ಜೀವನಾಂಶ ಪಾವತಿಸಬೇಕು ಎಂದು ಹೇಳಿದ್ದಾರೆ.