ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪುನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಹೈಕೋರ್ಟ್ನ ಜನಪ್ರತಿನಿಧಿಗಳ ಪೀಠದಲ್ಲಿ ಎರಡು ಕೇಸ್ ಗಳಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಹಾಗೂ ಒಂದು ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ತೀರ್ಪುನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಆರೋಪಿ ಪ್ರಭಾವಿಯಾಗಿದ್ದು ಜಾಮೀನಿನ ಮೇಲೆ ಹೊರ ಬಂದ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಲಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು ಎಂದು ಎಸ್ಪಿಪಿ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದರು. ವಾದ ವಿವಾದ ಆಲಿಸಿದ ಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ ಅವರಿದ್ದ ಆದೇಶವನ್ನ ಕಾಯ್ದಿರಿಸಿದ್ದಾರೆ.