alex Certify BREAKING : ಅತ್ಯಾಚಾರ ಕೇಸ್ : ಶಾಸಕ ‘ಮುನಿರತ್ನ’ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ಯಾಚಾರ ಕೇಸ್ : ಶಾಸಕ ‘ಮುನಿರತ್ನ’ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆ.!

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿಕೆಯಾಗಿದೆ.

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಂತಹ ಬಿಜೆಪಿ ಶಾಸಕ ಮುನಿರತ್ನ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಡೆಸಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆ.25 ಕ್ಕೆ ಮತ್ತೆ ಮುಂದೂಡಿದೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ) ರಚನೆ ಮಾಡಿ ಆದೇಶ ಹೊರಡಿಸಿತ್ತು.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಶಾಸಕ ಜೈಲು ಸೇರುತ್ತಿದ್ದಂತೆ ಮುನಿರತ್ನ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮುನಿರತ್ನ ಅವರನ್ನು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದರ ನಡುವೆ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...