alex Certify ಮೈಸೂರು ಗ್ಯಾಂಗ್ರೇಪ್ ಕೇಸ್ ಗೆ ಮೇಜರ್ ಟ್ವಿಸ್ಟ್: ಆರೋಪಿಗಳ ಸ್ಫೋಟಕ ಸತ್ಯ ಕೇಳಿ ಪೊಲೀಸರಿಗೇ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಗ್ಯಾಂಗ್ರೇಪ್ ಕೇಸ್ ಗೆ ಮೇಜರ್ ಟ್ವಿಸ್ಟ್: ಆರೋಪಿಗಳ ಸ್ಫೋಟಕ ಸತ್ಯ ಕೇಳಿ ಪೊಲೀಸರಿಗೇ ಶಾಕ್

ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿ ನೀಡಿದ್ದಾರೆ. ಆರೋಪಿಗಳು ವಿಚಾರಣೆ ಸಂದರ್ಭದಲ್ಲಿ ನೀಡಿದ ಮಾಹಿತಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ ಎನ್ನಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ವ್ಯಾಪಾರಕ್ಕೆ ಮೈಸೂರಿಗೆ ಬರುತ್ತಿದ್ದ ಆರೋಪಿಗಳು ಮೈಸೂರು ಸೇಫ್ ಸಿಟಿ ಎನ್ನುವ ಕಾರಣಕ್ಕೆ ನಿರ್ಜನ ಪ್ರದೇಶದಲ್ಲಿ ದರೋಡೆ, ಅತ್ಯಾಚಾರದಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಬಹುತೇಕರು ಮಾನ-ಮರ್ಯಾದೆಗೆ ಅಂಜಿ ದೂರು ನೀಡುವ ಗೋಜಿಗೆ ಹೋಗುತ್ತಿರಲಿಲ್ಲ ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು ಮೈಸೂರಿಗೆ ಬಂದಾಗ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದರು ಎನ್ನಲಾಗಿದೆ.

ಆಗಸ್ಟ್ 24 ರಂದು ಯುವಕನನ್ನು ಥಳಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾಗ ಅಲ್ಲಿಂದ ತೆರಳಿದ್ದಾಗಿ ತಪ್ಪಿಸಿಕೊಂಡಿದ್ದಾರೆ. ಮೈಸೂರು ಸೇಫ್ ಸಿಟಿ ಎನ್ನುವ ಕಾರಣಕ್ಕೆ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಯಾವುದೇ ಕೇಸು ದಾಖಲಾಗದ ಕಾರಣ ಅದೇ ವಿಶ್ವಾಸದಲ್ಲಿ ಅಪರಾಧ ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...