ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಅತ್ಯಾಚಾರ ಪ್ರಕರಣ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನ್ಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಅರ್ಜಿ ವಜಾಗೊಳಿಸಿದೆ. ಇದೇ ವೇಳೆ ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿ ಮಹಿಳೆಯೊಬ್ಬರು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.