ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಆದೇಶವನ್ನು ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ.
ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗಾಗಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದರು. ವಾದ ವಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಗಿಸಿ ಆದೇಶವನ್ನು ಕಾಯ್ದಿರಿಸಿದೆ. ಆರೋಪಿ ಪ್ರಭಾವಿಯಾಗಿದ್ದು ಜಾಮೀನಿನ ಮೇಲೆ ಹೊರ ಬಂದ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಲಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು ಎಂದು ಎಸ್ಪಿಪಿ ಪ್ರೊ.ರವಿವರ್ಮಕುಮಾರ್ ವಾದ ಮಂಡಿಸಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಇದೊಂದು ಪಾಪದ ಕೃತ್ಯ ಎಂದು ಹೈಕೋರ್ಟ್ ಇತ್ತೀಚೆಗೆ ಛೀಮಾರಿ ಹಾಕಿತ್ತು.ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ದೂರು ಹಾಗೂ ನಂತರದ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಮಾಜಿ ಶಾಸಕ ಪ್ರೀಂತಂ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಅಶ್ಲೀಲ ವಿಡಿಯೋ ಹಂಚಿಕೆ ಒಂದು ಪಾಪದ ಕೃತ್ಯ ಎಂದು ಅಭಿಪ್ರಾಯಪಟ್ಟಿತ್ತು.