ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವೀರೇಂದ್ರ ಬಾಬು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಅಲ್ಲದೇ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು. 15 ಲಕ್ಷ ರೂ ಹಣ ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎನ್ನಲಾಗಿದೆ. ಘಟನೆ ಸಂಬಂಧ ಮಹಿಳೆ ದೂರು ದಾಖಲಿಸಿದ್ದು, ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಕೊಡಿಗೆಹಳ್ಳಿ ಪೊಲೀಸರು ಅರೋಪಿ ವೀರೇಂದ್ರ ಬಾಬು ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.