ಬೆಂಗಳೂರಲ್ಲಿ ನಿರ್ಭಯಾ ಮಾದರಿ ಗ್ಯಾಂಗ್ ರೇಪ್ ನಡೆದಿದ್ದು, ಯುವತಿಯ ಖಾಸಗಿ ಅಂಗಕ್ಕೆ ಮದ್ಯದ ಬಾಟಲಿ ನೂಕಿ ಮೃಗೀಯ ಅತ್ಯಾಚಾರ ಎಸಗಲಾಗಿದೆ. ಪೈಶಾಚಿಕ ಕೃತ್ಯವೆಸಗಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇದೊಂದು ಅಮಾನುಷ ಕೃತ್ಯ. ಇಂತಹ ಘಟನೆ ಸಹಿಸಲು ಸಾಧ್ಯವಿಲ್ಲ. ಸರಿಯಾದ ಶಿಕ್ಷೆ ಆಗಲಿದೆ. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಅತ್ಯಾಚಾರದ ವಿಡಿಯೋ ಉತ್ತರಭಾರತದಲ್ಲಿ ಹರಿದಾಡುತ್ತಿದ್ದು, ನಂತರ ಬೆಂಗಳೂರಿನಲ್ಲಿ ನಡೆದಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದಕ್ಕೆ ನಮ್ಮ ಪೊಲೀಸರನ್ನು ಪ್ರಶಂಸಿಸುತ್ತೇನೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.