ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.
ಗ್ರಾಮದ ಕೂಲಿ ಕಾರ್ಮಿಕನಾಗಿರುವ 34 ವರ್ಷದ ವ್ಯಕ್ತಿ ಇಂತಹ ಕೃತ್ಯವೆಸಗಿದ್ದಾನೆ. ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ 10 ವರ್ಷದ ಪುತ್ರಿ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದು, ಬಾಲಕಿ ತನ್ನ ಸಹೋದರಿಗೆ ವಿಷಯ ತಿಳಿಸಿದ್ದಾಳೆ. ಗುರುವಾರ ವಿಷಯ ಬೆಳಕಿಗೆ ಬಂದಿದ್ದು, ಬಾಲಕಿ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳ ಅಧಿಕಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.