
ಚಿಕ್ಕಬಳ್ಳಾಪುರ: ಮಹಿಳೆಯನ್ನು ಕೊಲೆ ಮಾಡಿ ಅತ್ಯಾಚಾರವೆಸಗಿದ್ದ ವಿಕೃತಕಾಮಿಯನ್ನು ಬಟ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಂಕರಪ್ಪ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 19 ರಂದು ಕೋನಾಪುರ ಬಳಿ ಘಟನೆ ನಡೆದಿತ್ತು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಒಂಟಿ ಮಹಿಳೆಯ ಮೇಲೆ ದಾಳಿ ಮಾಡಿದ್ದ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಪ್ರತಿರೋಧ ಒಡ್ಡಿದಾಗ ಆಕೆಯನ್ನು ಕೊಲೆ ಮಾಡಿದ್ದು, ಶವದ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.