ಗ್ವಾಲಿಯರ್: ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯೇ ಅತ್ಯಾಚಾರವೆಸಗಿರುವ ಘಟನೆ ಮದ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.
25 ವರ್ಷ ವೈದ್ಯೆ ಮೇಲೆ ಸಹೋದ್ಯೋಗಿ ಅತ್ಯಾಚಾರವೆಸಗಿದ್ದು, ಸದ್ಯ ಆರೋಪಿ ವೈದ್ಯನನ್ನು ಬಂಧಿಸಲಾಗಿದೆ. ಸಂತ್ರಸ್ತೆ ವೈದ್ಯಕೀಯ ಕಾಲೇಜಿನ ಗರ್ಲ್ಸ್ ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ಹುಡುಗರ ಹಾಸ್ಟೇಲ್ ಗೆ ಕರೆಸಿಕೊಂಡು ಆರೋಪಿ ಅತ್ಯಾಚಾರವೆಸಗಿದ್ದಾನೆ.
ಸಂತ್ರಸ್ತೆ ಹಾಗೂ ಆರೋಪಿ ಒಂದೇ ವೈದ್ಯಕೀಯ ಕಾಲೇಜಿನಲ್ಲಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಸಂತ್ರಸ್ತೆ ನೀದಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.