ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
16 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳವಾರ ಕೆಲಸದ ನಿಮಿತ್ತ ಪತ್ನಿ ಮತ್ತು ಕಿರಿಯ ಪುತ್ರಿ ಬೇರೆ ಊರಿಗೆ ಹೋಗಿದ್ದ ವೇಳೆ ಆರೋಪಿ ಕೃತ್ಯವೆಸಗಿದ್ದಾನೆ.
ಹಿರಿಯ ಪುತ್ರಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಅತ್ಯಾಚಾರ ಎಸಗಿದ್ದು, ತಾಯಿಗೆ ಕರೆ ಮಾಡಿದ ಬಾಲಕಿ ವಿಷಯ ತಿಳಿಸಿದ್ದಾಳೆ. ಕೂಡಲೇ ಮನೆಗೆ ಮರಳಿದ ತಾಯಿ ಬಾಲಕಿಯನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಮೃತೂರು ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.