alex Certify ಪುತ್ರಿ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ತಕ್ಕ ಶಾಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರಿ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ತಕ್ಕ ಶಾಸ್ತಿ

ಬೆಂಗಳೂರು: ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ತಂದೆಗೆ ಹೈಕೋರ್ಟ್ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಆರೋಪಿಯನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

14 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ತಂದೆಯನ್ನು ಬೆಳಗಾವಿ ಪೋಕ್ಸೋ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಹೆಚ್.ಟಿ. ನರೇಂದ್ರ ಪ್ರಸಾದ್, ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರು ಇದ್ದ ಹೈಕೋರ್ಟ್ ಪೀಠ ಆರೋಪಿಯನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. ಇದೊಂದು ಅಮಾನವೀಯ ಕೃತ್ಯ ಎಂದು ಹೇಳಿದ ಕೋರ್ಟ್ ಬಾಲಕಿ ಅನುಭವಿಸಿದ ಆಘಾತವನ್ನು ಕಡೆಗಣಿಸಲಾಗದು ಎಂದು ಹೇಳಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...