alex Certify ಅರಣ್ಯ ಇಲಾಖೆ ಅಧಿಕಾರಿಯಿಂದ ಅತ್ಯಾಚಾರ, ಖಾಸಗಿ ಚಿತ್ರ ಬಹಿರಂಗಪಡಿಸುವ ಬೆದರಿಕೆ; ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯ ಇಲಾಖೆ ಅಧಿಕಾರಿಯಿಂದ ಅತ್ಯಾಚಾರ, ಖಾಸಗಿ ಚಿತ್ರ ಬಹಿರಂಗಪಡಿಸುವ ಬೆದರಿಕೆ; ದೂರು

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

ಧಾರವಾಡದಲ್ಲಿ 2019 ರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಸತಿಗೃಹಕ್ಕೆ ಕರೆಸಿಕೊಂಡಿದ್ದ ಅಧಿಕಾರಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ. ಶಿವಮೊಗ್ಗಕ್ಕೆ ವರ್ಗಾವಣೆಯಾದ ನಿರ್ಲಕ್ಷ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ಅಲ್ಲದೆ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದು, ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.

ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 22 ರಂದು ದೂರು ದಾಖಲಿಸಲಾಗಿತ್ತು. ಘಟನೆ ಧಾರವಾಡದಲ್ಲಿ ನಡೆದಿದ್ದ ಹಿನ್ನೆಲೆಯಲ್ಲಿ ಧಾರವಾಡ ಉಪನಗರ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...