
ವಿಜಯಪುರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿಯನ್ನು ಮನೆಗೆ ಕರೆದೊಯ್ದ 52 ವರ್ಷದ ವ್ಯಕ್ತಿ ಇಂತಹ ಕೃತ್ಯವೆಸಗಿದ್ದು, ಆರೋಪಿಯನ್ನು ತಾಳಿಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.