alex Certify ಪಕ್ಕದ ಮನೆಯವನಿಂದಲೇ ಆಘಾತಕಾರಿ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಕದ ಮನೆಯವನಿಂದಲೇ ಆಘಾತಕಾರಿ ಕೃತ್ಯ

ಶಿಮ್ಲಾ: ಹಿಮಾಚಲ ಪ್ರದೇಶದ ಚೌಪಾಲ್ ನೆರ್ವಾನ್ ತಹಸೀಲ್ ಪ್ರದೇಶದಲ್ಲಿ ಯುವಕನೊಬ್ಬ ಪಕ್ಕದ ಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಅಪ್ರಾಪ್ತೆಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿದ್ಯಾರ್ಥಿಯಾಗಿದ್ದು, ಆತ ವಯಸ್ಕನೇ? ಅಲ್ಲವೇ ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.

ಆಟವಾಡುವ ನೆಪದಲ್ಲಿ ಬಾಲಕಿಯನ್ನು ಮನೆಯ ಸಮೀಪವೇ ಇದ್ದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕೂಗಾಟ ಕೇಳಿದ ತಾಯಿ ಸ್ಥಳಕ್ಕೆ ತೆರಳಿದಾಗ ಆರೋಪಿ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನ ವಯಸ್ಸಿನ ದಾಖಲೆ ಸಂಗ್ರಹಿಸಲು ಕ್ರಮ ಕೈಗೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ಲಖ್ವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...