
ಕೆಜಿಎಫ್: ಬಾಲಕಿ ಮೇಲೆ ಅತ್ಯಾಚಾರ ಎಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಲಾಗಿದೆ.
ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಂಗಾಧರ್(28) ಶಿಕ್ಷೆಗೊಳಗಾದ ವ್ಯಕ್ತಿ. ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದು, ಆತನಿಗೆ ಶಿಕ್ಷೆ ವಿಧಿಸಲಾಗಿದೆ. ಸಿಪಿಐ ಸುರೇಶ್ ರಾಜು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ- 1 ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ. ಪ್ರಸಾದ್ ವಿಚಾರಣೆ ನಡೆಸಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು 45 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಡಿ. ಲಲಿತಾಕುಮಾರಿ ಅವರು ವಾದ ಮಂಡಿಸಿದ್ದರು.