
ಯಾದಗಿರಿ: ಹಿಟ್ಟಿನ ಗಿರಣಿಗೆ ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಘಟನೆ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಭೀಮರಾಯನಗುಡಿಯಲ್ಲಿ ಘಟನೆ ನಡೆದಿದೆ. ಹಿಟ್ಟಿನ ಗಿರಣಿಯಲ್ಲಿ ಬಾಲಕಿಯನ್ನು ಕೂಡಿಟ್ಟುಕೊಂಡು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗಿರಣಿ ಮಾಲೀಕ ಶಾಂತಗೌಡನನ್ನು ಭೀಮರಾಯನ ಗುಡಿ ಠಾಣೆ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆನ್ನಲಾಗಿದೆ.