ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ 30 ಕ್ಕೂ ಅಧಿಕ ಮಂದಿ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಆಣೂರು ಕಲ್ಲುಗುಡ್ಡೆಯಲ್ಲಿ ಅಪ್ರಾಪ್ತರ ಮೇಲೆ 7ಕ್ಕೂ ಹೆಚ್ಚು ಯುವಕರು ಅತ್ಯಾಚಾರ ಎಸಗಿದ್ದಾರೆ. 13 ವರ್ಷದ ವಿದ್ಯಾರ್ಥಿನಿ 8 ನೇ ತರಗತಿ ಓದುತ್ತಿದ್ದು, ಆಕೆಯ ಮೇಲೆ 7 ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿದ್ದಾರೆ. ಮೊಬೈಲ್ನಲ್ಲಿ ದೃಶ್ಯ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿ ಮತ್ತೆ ಮತ್ತೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಮುಖ ಆರೋಪಿ ಸಂದೇಶ್ ಎಂಬುವನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.