ಚಿಕ್ಕಬಳ್ಳಾಪುರ: ಬಾಲಕಿಯನ್ನು ವೇಶ್ಯಾವಾಟಿಕೆಗೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. 7 ಜನರಿಂದ ನಿರಂತರ ಅತ್ಯಾಚಾರ ಎಸಗಿದ ಆರೋಪವೂ ಕೂಡ ಕೇಳಿ ಬಂದಿದೆ.
14 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಬಾಲಕಿ ಗರ್ಭಿಣಿಯಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂರ್ತಿ, ರಾಜೇಶ, ವಿನೋದ ಸೇರಿದಂತೆ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.