![](https://kannadadunia.com/wp-content/uploads/2021/03/arrest_jail_court-770x433-1.jpg)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರ ಎಸಗಿದ್ದು, ಬಾಲಕಿ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ, ಪೋಕ್ಸೋ ಕಾಯ್ದೆಯಡಿ ಮೂವರ ವಿರುದ್ಧ ಕೇಸು ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆ ಪೊಲೀಸರು ಅಪ್ರಾಪ್ತ ಬಾಲಕ, ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.