
ಬೆಂಗಳೂರು: 8 ವರ್ಷದ ಬಾಲಕಿಯ ಮೇಲೆ ಮನೆ ಮಾಲೀಕನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿ ಮನೆಯವರು ಕೆಲಸಕ್ಕೆ ತೆರಳಿದ್ದಾಗ ಮನೆಯ ಮಾಲೀಕ ಹರೀಶ್ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಹರೀಶ್ ಮನೆಗೆ ಸಂತ್ರಸ್ತೆಯ ಕುಟುಂಬದವರು ಬಾಡಿಗೆಗೆ ಬಂದಿದ್ದರು. ಬಾಲಕಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.