ವೈದ್ಯೆಯ ಕೊಲೆ, ಅತ್ಯಾಚಾರ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ಭುಗಿಲೆದಿದ್ದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್ ಗಳನ್ನು ಎಳೆದು ಹಾಕಿದ್ದಾರೆ.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್ ಗಳನ್ನು ಪ್ರಯೋಗಿಸಿದ್ದಾರೆ.ಪ್ರತಿಭಟನಾಕಾರರು ಬ್ಯಾರಿಕೇಡ್ ಗಳ ಮೇಲೆ ಹತ್ತಿ ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ.
ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ‘ನಬನ್ನಾ ಅಭಿಯಾನ್’ ಮೆರವಣಿಗೆ ನಡೆಸಲಾಗುತ್ತಿದೆ. ಸಿಎಂ ನಿವಾಸಕ್ಕೆ ಕೂಡ ಪ್ರತಿಭಟನಾಕಾರರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.ಪ್ರತಿಭಟನಾಕಾರರು ಸಚಿವಾಲಯದ ಕಡೆಗೆ ಮೆರವಣಿಗೆ ನಡೆಸುತ್ತಿರುವುದರಿಂದ ನಬನ್ನಾ ಹೊರಗೆ 6000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು 3 ಪದರಗಳ ಭದ್ರತೆಯೊಂದಿಗೆ ನಿಯೋಜಿಸಲಾಗಿದೆ. ಆರ್ ಜಿ ಕಾರ್ ಘಟನೆಯಲ್ಲಿ ನ್ಯಾಯ ವಿಳಂಬಕ್ಕಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.
https://x.com/ani_digital/status/1828343429161439428