ಕಲಬುರಗಿ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗೆ ಕೊಲೆ ಮಾಡಲಾಗಿದೆ. ನಿನ್ನ ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. 9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು. ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.