ಬೆಂಗಳೂರು: ಹೂಡಿಕೆ ನೆಪದಲ್ಲಿ ಪರಿಚಿತ ಮಹಿಳೆಯನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ಉದ್ಯಮಿಯೊಬ್ಬರ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 6 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ಉದ್ಯಮಿಯ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಬಂಧಿ ಮೂಲಕ ಸಂತ್ರಸ್ತೆಗೆ ಉದ್ಯಮಿ ಪರಿಚಯವಾಗಿದ್ದು, ಸಾಫ್ಟ್ವೇರ್ ಉದ್ಯಮದಲ್ಲಿ ತೊಡಗಿಕೊಂಡಿರುವ ಮಹಿಳೆಗೆ ಯೋಜನೆಗೆ ಬಂಡವಾಳ ಹೂಡುವುದಾಗಿ ಹೇಳಿ ಹೋಟೆಲ್ ಗೆ ಕರೆಸಿಕೊಂಡಿದ್ದ ಆರೋಪಿ ಅತ್ಯಾಚಾರ ಎಸಗಿರುವುದಾಗಿ ದೂರು ನೀಡಲಾಗಿದೆ.