alex Certify ಮತ್ತು ಬರುವ ಪದಾರ್ಥ ನೀಡಿ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ, ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ ನಿರಂತರ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತು ಬರುವ ಪದಾರ್ಥ ನೀಡಿ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ, ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ ನಿರಂತರ ರೇಪ್

ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಕೊಟ್ಟು ಅತ್ಯಾಚಾರ ಎಸಗಿದ್ದು, ಮಹಿಳೆಯನ್ನು ಬ್ಲಾಕ್ಮೇಲ್ ಮಾಡಿ ಹಲವಾರು ಬಾರಿ ನಿರಂತರ ಅತ್ಯಾಚಾರ ಎಸಗಿದ್ದಾಗಿ ಮಹಿಳೆ ದೂರು ನೀಡಿದ್ದಾರೆ.

ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದು, ಶಿವಮೊಗ್ಗ ತಾಲ್ಲೂಕಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮಹಿಳೆಯ ಪರಿಚಯವಾಗಿದ್ದು, ಆಕೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಪೊಲೀಸ್ ಅಧಿಕಾರಿ ಮಹಿಳೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರದಲ್ಲಿ ಅಶ್ಲೀಲ ಫೋಟೋ, ವಿಡಿಯೋ ಇಟ್ಟುಕೊಂಡು ಮಹಿಳೆಯನ್ನು ಹೇಳಿದ ಸ್ಥಳಕ್ಕೆ ಕರೆಸಿಕೊಂಡು ನಿರಂತರ ಅತ್ಯಾಚಾರ ಎಸಗಿದ್ದಾರೆ ಆರೋಪಿಸಲಾಗಿದೆ.

ಹೇಳಿದಂತೆ ಕೇಳದಿದ್ದರೆ ವೇಶ್ಯಾವಾಟಿಕೆ, ಹನಿಟ್ರ್ಯಾಪ್ ನಂತಹ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಲಾಗಿದೆ. ಪೊಲೀಸ್ ಅಧಿಕಾರಿಯಿಂದ ನೊಂದ ಮಹಿಳೆ ದೂರು ನೀಡಿದ್ದು, ಮಹಿಳೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...