ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಿಸಲಾಗಿದೆ.
ಕೌಲ್ ಬಜಾರ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸೈಯದ್ ಇಮ್ರಾನ್ ಮತ್ತು ಅವರ ಅಕ್ಕನ ಮಗ, ಬಳ್ಳಾರಿ ಸಂಚಾರ ಠಾಣೆಯ ಸಿಬ್ಬಂದಿ ಪೊಲೀಸ್ ಆಜಾದ್ ಅವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಜಾದ್ ಅವರನ್ನು ಬಂಧಿಸಲಾಗಿದ್ದು, ಇಮ್ರಾನ್ ಪರಾರಿಯಾಗಿದ್ದಾರೆ. ಇಬ್ಬರೂ ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ. ಶೋಭಾರಾಣಿ ವಿ.ಜೆ. ಅವರು ತಿಳಿಸಿದ್ದಾರೆ.
ಮಹಿಳೆಯ ಪತಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದು, ಇಮ್ರಾನ್ ಆಕೆಗೆ 15,000 ರೂ. ನೀಡಿ ಮನೆ ಮಾಡಿಕೊಳ್ಳಲು ನೆರವಾಗಿದ್ದು, ನಂತರ ಆರೋಪಿಗಳು ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.