ದಾವಣಗೆರೆ: ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಮೂರು ತಿಂಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೊಟ್ಟೆ ನೋವು ಎಂದು ಹೇಳಿದ ಬಾಲಕಿಯನ್ನು ಪೋಷಕರು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಆಕೆಯನ್ನು ಪರೀಕ್ಷಿಸಿ ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕೆಂಗಲಹಳ್ಳಿ ಗ್ರಾಮದ ಯುವಕನನ್ನು ಅತ್ಯಾಚಾರ ಆರೋಪದ ಮೇಲೆ ಬಂಧಿಸಲಾಗಿದೆ. ಮೂರು ತಿಂಗಳ ಹಿಂದೆ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ತಿನಿಸು ಕೊಡಿಸುವುದಾಗಿ ಕರೆದುಕೊಂಡು ಹೋದ ಯುವಕ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಶನಿವಾರ ವಿಷಯ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.