ಶಿವಮೊಗ್ಗ: 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿ ವಿರುದ್ಧ ತೀರ್ಥಹಳ್ಳಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಲಕಿ ಮನೆ ಸಮೀಪ ಗಾರೆ ಕೆಲಸಕ್ಕೆ ಬರುತ್ತಿದ್ದ ಯುವಕ ಆಕೆಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಬೈಕ್ ನಲ್ಲಿ ಸುತ್ತಾಡಿಸಿದ್ದಾನೆ. ಬಳಿಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು, ತಾಯಿಗೆ ಮಾಹಿತಿ ನೀಡಿದ್ದಾಳೆ. ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ತೀರ್ಥಹಳ್ಳಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.