alex Certify ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯಾದ ಪುತ್ರಿ ತಾಯಿಗೆ ಮಾಹಿತಿ ನೀಡಿದ ಬಳಿಕ ಬಯಲಾಯ್ತು ನೀಚ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯಾದ ಪುತ್ರಿ ತಾಯಿಗೆ ಮಾಹಿತಿ ನೀಡಿದ ಬಳಿಕ ಬಯಲಾಯ್ತು ನೀಚ ಕೃತ್ಯ

ಶಿವಮೊಗ್ಗ: 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪಿ ವಿರುದ್ಧ ತೀರ್ಥಹಳ್ಳಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಲಕಿ ಮನೆ ಸಮೀಪ ಗಾರೆ ಕೆಲಸಕ್ಕೆ ಬರುತ್ತಿದ್ದ ಯುವಕ ಆಕೆಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಬೈಕ್ ನಲ್ಲಿ ಸುತ್ತಾಡಿಸಿದ್ದಾನೆ. ಬಳಿಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು, ತಾಯಿಗೆ ಮಾಹಿತಿ ನೀಡಿದ್ದಾಳೆ. ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ತೀರ್ಥಹಳ್ಳಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...