
ಚಿಕ್ಕಮಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕಾಶ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳೆಯ ಪತಿ ಕಳೆದ ವರ್ಷ ಮೃತಪಟ್ಟಿದ್ದಾರೆ. ಅವರ ನಿಧನದ ನಂತರದಲ್ಲಿ ಮಗಳೊಂದಿಗೆ ಮಹಿಳೆ ವಾಸವಾಗಿದ್ದು, ಅವರನ್ನು ಮದುವೆಯಾಗುವುದಾಗಿ ನಂಬಿಸಿದ್ದ ಪಕ್ಕದಮನೆಯ ಪ್ರಕಾಶ್ ಅತ್ಯಾಚಾರ ಎಸಗಿದ್ದಾನೆ.
ಕಳೆದ ಜನವರಿಯಿಂದ ನಿರಂತರ ಅತ್ಯಾಚಾರ ಎಸಗಿದ್ದು, ಮಹಿಳೆ ಗರ್ಭಿಣಿಯಾಗಿದ್ದಾಳೆ. ಈಗ ಆರೋಪಿ ಮದುವೆಯಾಗಲು ನಿರಾಕರಿಸಿರುವುದಾಗಿ ದೂರು ನೀಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.