alex Certify ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಭಾವನಿಂದಲೇ ಅತ್ಯಾಚಾರ

ಶಿವಮೊಗ್ಗ: ಅಕ್ಕನ ಮನೆಗೆ ಬಂದಿದ್ದ ನಾದಿನಿ ಮೇಲೆ ಅತ್ಯಾಚಾರ ಎಸಗಿದ ಅಕ್ಕನ ಗಂಡನ ವಿರುದ್ಧ ಶಿವಮೊಗ್ಗ ತಾಲ್ಲೂಕಿನ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಎಸ್ಎಸ್ಎಲ್ಸಿ ಫೇಲಾಗಿದ್ದ ಬಾಲಕಿ ಅಕ್ಕನ ಮನೆಗೆ ಬಂದಿದ್ದಳು. ಆಕೆಯ ಮೇಲೆ ಭಾವ ಅತ್ಯಾಚಾರ ಎಸಗಿದ್ದು ಗರ್ಭಿಣಿಯಾಗಿದ್ದಾಳೆ. 7 ನೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಬಾಲಕಿಯನ್ನು ಸಖಿ ಕೇಂದ್ರಕ್ಕೆ ಬಿಡಲಾಗಿದ್ದು, ಮಗುವನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ. ಮಗು ಮೃತಪಟ್ಟಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...