alex Certify ಶಾಲೆಯಲ್ಲೇ ಪ್ರಾಂಶುಪಾಲನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ ಪ್ರಾಂಶುಪಾಲನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಯಾದಗಿರಿ: ಯಾದಗಿರಿ ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಪ್ರಭಾರ ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಶಾಲೆಗೆ ಖುದ್ದಾಗಿ ಭೇಟಿ ನೀಡಿ ವರದಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲನಾಗಿರುವ ವಿಜ್ಞಾನ ಶಿಕ್ಷಕ ನವೆಂಬರ್ 1 ರಂದು ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆಸಲಾಗಿದೆ. ನೊಂದ ಬಾಲಕಿ ಅಧಿಕಾರಿಯೊಬ್ಬರಿಗೆ ದೂರು ಸಲ್ಲಿಸಿದ್ದು, ಆಕೆ ಶಾಲೆಗೆ ಬರುತ್ತಿಲ್ಲ ಎನ್ನಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...