alex Certify ಶಾಕಿಂಗ್: ಸಹೋದರಿ ಪುಸಲಾಯಿಸಿ ಅತ್ಯಾಚಾರ, ಗರ್ಭಿಣಿಯಾದ ನಂತರ ಬಯಲಾಯ್ತು ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಸಹೋದರಿ ಪುಸಲಾಯಿಸಿ ಅತ್ಯಾಚಾರ, ಗರ್ಭಿಣಿಯಾದ ನಂತರ ಬಯಲಾಯ್ತು ರಹಸ್ಯ

ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಅಪ್ರಾಪ್ತ ವಯಸ್ಸಿನ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಚಿಕ್ಕಪ್ಪನ ಮಗಳನ್ನು ಪುಸಲಾಯಿಸಿ ಇಂತಹ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಗೋಕರ್ಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಯಿಲ್ಲದ 12 ವರ್ಷದ ಬಾಲಕಿ ತಂದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಅವರು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಬಾಲಕಿ ಯುವಕನ ಮನೆಗೆ ಬರುತ್ತಿದ್ದಳು. ಆತನ ಮನೆಯವರು ಕೂಡ ಕೆಲಸಕ್ಕೆ ಹೋಗುತ್ತಿದ್ದರಿಂದ ಆಕೆಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಬಾಲಕಿ ಗರ್ಭಿಣಿಯಾದ ನಂತರ ವಿಷಯ ಬೆಳಕಿಗೆ ಬಂದಿದ್ದು ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಂಟು ತಿಂಗಳ ಗರ್ಭಿಣಿಯಾಗಿರುವ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...