alex Certify SHOCKING: ಅಣ್ಣನಿಂದಲೇ ಮಾನಗೇಡಿ ಕೃತ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಅಣ್ಣನಿಂದಲೇ ಮಾನಗೇಡಿ ಕೃತ್ಯ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಆಕೆಯ ದೊಡ್ಡಪ್ಪನ ಮಗ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಸಾಗರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ಅಪ್ರಾಪ್ತೆ, ಆಕೆಯ ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಸಾಗರದಲ್ಲಿ ನೆಲೆಸಿದ್ದರು. ಸಾಗರ ತಾಲ್ಲೂಕಿನ ಗ್ರಾಮವೊಂದರಲ್ಲಿ, ದೊಡ್ಡಪ್ಪನ ಮನೆ ಇದ್ದು, ಅಲ್ಲಿಗೆ ಆಗಾಗ ಹೋಗಿ ಬರುತ್ತಿದ್ದರು. ಮೇ ತಿಂಗಳಲ್ಲಿ ದೊಡ್ಡಪ್ಪನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೊಡ್ಡಪ್ಪನ ಮಗ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ.

ಘಟನೆ ನಡೆದ ನಂತರ ವಿಷಯ ಯಾರಿಗೂ ಹೇಳಿರಲಿಲ್ಲ. ಇತ್ತೀಚೆಗೆ ತಾಯಿಯೊಂದಿಗೆ ಬಾಲಕಿ ದಾವಣಗೆರೆ ಜಿಲ್ಲೆಯ ಜಗಳೂರಿಗೆ ಹೋಗಿದ್ದು, ಸಂಬಂಧಿಕರಿಗೆ ವಿಚಾರ ಗೊತ್ತಾಗಿದೆ. ನಂತರ ದಾವಣಗೆರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಗಳೂರಿನ ಶಿಶು ಅಭಿವೃದ್ಧಿ ಯೋಜನೆ ಮಹಿಳಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ಬಿಳಚೋಡು ಠಾಣೆಗೆ ದೂರು ನೀಡಲಾಗಿದೆ. ನಂತರ ಪ್ರಕರಣವನ್ನು ಸಾಗರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...