ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದು, ತಂದೆ, ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ಪರಾರಿಯಾಗಿದ್ದಾನೆ. ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆರೋಪಿಗೆ ಮದುವೆಯಾಗಿ ಪತ್ನಿ ದೂರವಾಗಿದ್ದಾಳೆ. ತಂದೆ, ತಾಯಿಯೊಂದಿಗೆ ವಾಸವಾಗಿದ್ದ ಆರೋಪಿ ಭಾನುವಾರ ರಾತ್ರಿ ಮದ್ಯದ ಅಮಲಲ್ಲಿ ಕೃತ್ಯವೆಸಗಿದ್ದಾನೆ. ಪೊಲೀಸರು ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಪಿ ತಂದೆಯಿಂದ ಮಾಹಿತಿ ಪಡೆದಿದ್ದಾರೆ.