
ಮೈಸೂರು: ಸಂಶೋಧನಾ ವಿದ್ಯಾರ್ಥಿನಿ ಮೇಲೆ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ರಕ್ಷಿಸಿ ಆಕೆಯ ಬೆಂಬಲಕ್ಕೆ ನಿಂತ ಪ್ರಾಧ್ಯಾಪಕನ ಪತ್ನಿ ದೂರು ಕೊಡಿಸಿದ್ದಾರೆ.
ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮೈಸೂರು ವಿವಿ ಮಾನಸ ಗಂಗೋತ್ರಿ ಕ್ವಾಟ್ರಸ್ ನಲ್ಲಿ ಗುರುವಾರ ಮಧ್ಯಾಹ್ನ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.
ಮಂಡ್ಯದಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸಂಶೋಧನಾ ವಿದ್ಯಾರ್ಥಿನಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಿ.ಹೆಚ್.ಡಿ. ಪಡೆಯಲು ಸಹಾಯ ಮಾಡುವುದಾಗಿ ಮನೆಗೆ ಕರೆಸಿಕೊಂಡ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಅವರ ಪತ್ನಿ ಮನೆಗೆ ಬಂದಿದ್ದು, ಅತ್ಯಾಚಾರಕ್ಕೆ ಒಳಗಾದ ಸಂಶೋಧನಾ ವಿದ್ಯಾರ್ಥಿನಿಯನ್ನು ರಚಿಸಿದ್ದಾರೆ. ಅಲ್ಲದೆ, ಗಂಡನ ವಿರುದ್ಧ ದೂರು ನೀಡಲು ನೆರವಾಗಿದ್ದಾರೆ ಎಂದು ಹೇಳಲಾಗಿದೆ.