ಅಗರ್ತಲಾ: ತ್ರಿಪುರಾದ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರು ತಮ್ಮ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಪ್ರಕರಣದ ಕುರಿತಾಗಿ ಧಲಾಯ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾ. ಗೌತಮ್ ಸರ್ಕಾರ್ ನೇತೃತ್ವದ ಮೂವರು ಸದಸ್ಯರ ಸಮಿತಿ ತನಿಖೆ ಆರಂಭಿಸಿದೆ. ತಮ್ಮ ಮೇಲೆ ನಡೆದ ಲೈಂಗಿಕ ಕಿರುಕುಳದ ಕುರಿತು ವಿವರಣೆ ನೀಡಲು ಫೆಬ್ರವರಿ 16ರಂದು ಕಮಲ್ ಪುರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಕಚೇರಿಗೆ ತೆರಳಿದ್ದ ವೇಳೆ ಅವರು ನನ್ನನ್ನು ಲೈಂಗಿಕವಾಗಿ ಹಿಂಸಿಸಿದ್ದಾರೆ. ಕೋರ್ಟ್ ಕಚೇರಿಯಿಂದ ಹೊರ ಬಂದ ಮೇಲೆ ವಕೀಲರು ಮತ್ತು ಪತಿಯ ಬಳಿ ವಿಷಯ ತಿಳಿಸಿದ್ದೇನೆ ಎಂದು ಸಂತ್ರಸ್ತೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ದೂರು ನೀಡಿದ್ದಾರೆ.