
ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಆರೋಪಿ ಚಿಂತಾಮಣಿ ಹೈದರಾಲಿ ನಗರದ ನಿವಾಸಿ ಇರ್ಫಾನ್(24) ಎಂಬವನನ್ನು ಬಂಧಿಸಲಾಗಿದೆ. ಮಂಗಳವಾರ ಮಧ್ಯರಾತ್ರಿ 12:40ರ ಸಮಯಕ್ಕೆ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಇರ್ಫಾನ್ ಚಿಕಿತ್ಸೆ ಪಡೆದುಕೊಂಡು ವಾಪಸ್ ಮನೆಗೆ ಹೊರಟಿದ್ದಾನೆ. ಈ ವೇಳೆ ಆಸ್ಪತ್ರೆ ಆವರಣದಲ್ಲಿರುವ ಆಕ್ಸಿಜನ್ ಪ್ಲಾಂಟ್ ಪಕ್ಕದ ಶೆಡ್ ನಲ್ಲಿ ಮಲಗಿದ್ದ 65 ವರ್ಷದ ವೃದ್ದೆ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಅತ್ಯಾಚಾರ ಎಸಗಿ ಮನೆಗೆ ತೆರಳಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ.