alex Certify Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ ‘ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ ‘ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಕಡೆ ಮುಂಗಾರು ಚುರುಕಾಗಿದ್ದು, ಉತ್ತಮ ಮಳೆಯಾಗುತ್ತಿದೆ.

ಇಂದು ಕೂಡ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರುಕರಾವಳಿಯ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು,  ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಇಂದು ಕೂಡ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಭಾರಿ ಮಳೆಯಾಗುವ ಸಾಕಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...